ಹಿರಿಯ ಪತ್ರಕರ್ತ ಈಶ್ವರ್ ದೈತೋಟರಿಗೆ ‘ಗೊಮ್ಮಟ ಮಾಧ್ಯಮ ಪ್ರಶಸ್ತಿ’

Update: 2019-02-21 08:01 GMT

ಬೆಂಗಳೂರು, ಫೆ.21: ಹಿರಿಯ ಪತ್ರಕರ್ತ ಈಶ್ವರ್ ದೈತೋಟ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರಸಕ್ತ ಸಾಲಿನ ‘ಗೊಮ್ಮಟ ಮಾಧ್ಯಮ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಕರ್ನಾಟಕ ಪತ್ರಕರ್ತರ ಸಂಘದಲ್ಲಿ ತ್ಯಾಗಮೂರ್ತಿ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಹೆಸರಿನಲ್ಲಿ ಸ್ಥಾಪಿಸಿರುವ ಈ ಪ್ರಶಸ್ತಿಯು 10,001 ರೂ. ನಗದು, ಫಲಕ ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿರುತ್ತದೆ.

ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ಮಾರ್ಚ್ 1 ಮತ್ತು 2ರಂದು ನಡೆಯಲಿರುವ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News