ವಿಜಯಪುರ: ನೂತನ ರೈಲು ನಿಲ್ದಾಣ ನಿರ್ಮಾಣ ಕಾಮಗಾರಿಗೆ ಚಾಲನೆ

Update: 2019-02-21 08:34 GMT

ವಿಜಯಪುರ, ಫೆ.21: ಕಳೆದ 60 ವರ್ಷಗಳಲ್ಲಿ ದೇಶದ ಆಡಳಿತ ಚುಕ್ಕಾಣಿ ದಿ.ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಅವರಂತಹ ನಾಯಕರ ಕೈಯಲ್ಲಿ ಇರುತ್ತಿದ್ದರೆ ದೇಶದ ಚಿತ್ರಣವೇ ಬದಲಾಗುತ್ತಿತ್ತು. ಆದರೆ ಕೇಂದ್ರದಲ್ಲಿ 60 ವರ್ಷ ಒಂದೇ ಒಂದು ಪಕ್ಷ ಕೇಂದ್ರಿತ ಆಡಳಿತ ವ್ಯವಸ್ಥೆಯಿಂದಾಗಿಯೇ ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ ಎಂದರು ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಟೀಕಿಸಿದರು.

ವಿಜಯಪುರದಲ್ಲಿ ನೂತನ ರೈಲು ನಿಲ್ದಾಣ ನಿರ್ಮಾಣ ಕಾಮಗಾರಿ ಹಾಗೂ ವಿಜಯಪುರ-ಮಿಂಚನಾಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.84 ರ ಬದಲಿಗೆ ನಿರ್ಮಿಸುತ್ತಿರುವ ರಸ್ತೆ ಮೇಲ್ಸೆತುವೆ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.

  ಈ ಸಂದರ್ಭ ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಾಜಿ ಸಚಿವ ಅಪ್ಪಾ ಸಾಹೆಬ ಪಟ್ಟಣಶೆಟ್ಟಿ, ಮೇಯರ್ ಶ್ರೀದೇವಿ ಲೋಗಾಂವಿ, ಪಾಲಿಕೆ ಸದಸ್ಯ ರವೀಂದ್ರ ಲೋಣಿ, ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಡಿ.ಎಸ್. ಗುಡ್ಡೋಡಗಿ, ಜಿಲ್ಲಾ ಪಂಚಾಯತ್ ಸದಸ್ಯ ನವೀನ್ ಅರಕೇರಿ, ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ, ರೈಲ್ವೇ ಅಧಿಕಾರಿ ಎಸ್.ಕೆ. ಝಾ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News