ಪ್ರತ್ಯೇಕ ಲಿಂಗಾಯತ ಧರ್ಮ ನನ್ನ ಅಸ್ಮಿತೆ: ಎಂ.ಬಿ.ಪಾಟೀಲ್

Update: 2019-02-21 12:51 GMT

ಗದಗ, ಫೆ.21: ಲಿಂಗಾಯತ ಪ್ರತ್ಯೇಕ ಧರ್ಮ ನನ್ನ ಅಸ್ಮಿತೆ, ನಾನು ಗೃಹ ಸಚಿವನಾಗಿ ಮುಂದಿನ ನಿರ್ಧಾರದ ಬಗ್ಗೆ ಏನೂ ಹೇಳಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದ ವಿಚಾರವನ್ನು ಜಾಗತಿಕ ಲಿಂಗಾಯತ ಮಹಾಸಭಾ ನೋಡಿಕೊಳ್ಳುತ್ತದೆ. ಕೇಂದ್ರ ಸರಕಾರ ಪ್ರತ್ಯೇಕ ಲಿಂಗಾಯತ ಧರ್ಮದ ಪ್ರಸ್ತಾವನೆ ತಿರಸ್ಕಾರ ಮಾಡಿದೆ.

ಸರಕಾರದ ತೀರ್ಮಾನದ ಕುರಿತು ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಮಹಾಸಭಾ ನಿರ್ಧಾರ ಮಾಡುತ್ತೆ. ಮಹಾಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಕಾನೂನಾತ್ಮಕ ಹೋರಾಟ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News