ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಚಿವ ಝಮೀರ್ ಅಹ್ಮದ್ ಆರ್ಥಿಕ ನೆರವು

Update: 2019-02-21 15:55 GMT

ಮಂಡ್ಯ, ಫೆ.21: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ರಾಜ್ಯದ ಸಿಆರ್‌ಪಿಎಫ್ ಯೋಧ ಎಚ್.ಗುರು ಕುಟುಂಬಕ್ಕೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್. ಝಮೀರ್‌ ಅಹ್ಮದ್‌ ಖಾನ್ ಆರ್ಥಿಕ ನೆರವು ಒದಗಿಸಿದ್ದಾರೆ.

ಗುರುವಾರ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆ ಕಾಲನಿಯಲ್ಲಿರುವ ಹುತಾತ್ಮ ಯೋಧ ಎಚ್.ಗುರು ನಿವಾಸಕ್ಕೆ ಭೇಟಿ ನೀಡಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಝಮೀರ್‌ ಅಹ್ಮದ್‌ ಖಾನ್, ರಾಜ್ಯ ವಕ್ಫ್ ಕೌನ್ಸಿಲ್ ವತಿಯಿಂದ 10 ಲಕ್ಷ ರೂ.ಹಾಗೂ ತಮ್ಮ ಒಡೆತನದ ನ್ಯಾಷನಲ್ ಟ್ರಾವಲ್ಸ್ ವತಿಯಿಂದ 10 ಲಕ್ಷ ರೂ.ಗಳ ಚೆಕ್ ಅನ್ನು ಅವರಿಗೆ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ರಿಝ್ವನ್ ಅರ್ಶದ್ 5 ಲಕ್ಷ ರೂ., ಬೆಂಗಳೂರಿನ ಕಬ್ಬನ್‌ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಹಾಗೂ ಹಝ್ರತ್ ಮುಹೀಬ್ ಶಾ ದರ್ಗಾ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ 1 ಲಕ್ಷ ರೂ. ಹಾಗೂ ಶಾಸಕ ಎನ್.ಎ.ಹಾರಿಸ್ 2 ಲಕ್ಷ ರೂ.ಗಳ ಚೆಕ್ ಅನ್ನು ಹುತಾತ್ಮ ಯೋಧನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News