ಹಿರಿಯಡಕ: ವ್ಯಕ್ತಿತ್ವ ವಿಕಸನ - ಉದ್ಯೋಗಾವಕಾಶ ಕಾರ್ಯಾಗಾರ

Update: 2019-02-21 15:15 GMT

 ಉಡುಪಿ, ಫೆ. 21: ಉದ್ಯೋಗ ಮಾಹಿತಿ ಕೋಶ ಮತ್ತು ಐಕ್ಯುಎಸಿ ವತಿ ಯಿಂದ ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಹಾಗೂ ಎಂ.ಕಾಂ. ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ಉದ್ಯೋಗಾವಕಾಶಗಳ ಕುರಿತ ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಹಾಗೂ ಇನ್‌ಸ್ಟಿಟ್ಯೂಟ್ ಫಾರ್ ಇಂಡಿವಿಜ್ವುಲ್ ಡೆವಲಪ್ ಮೆಂಟ್‌ನ ನಿರ್ದೇಶಕ ಪ್ರೊ.ರೊನಾಲ್ಡ್ ಪಿಂಟೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸಂದರ್ಶನ ಕಲೆ, ಸಮೂಹ ಚರ್ಚೆ, ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ಆಧುನಿಕ ಸಿ.ವಿ. ಬರವಣಿಗೆ, ಕ್ಯಾಂಪಸ್ ಆಯ್ಕೆಯ ವಿವಿಧ ಪರೀಕ್ಷೆಗಳನ್ನು ಎದುರಿಸುವ ವಿಧಾನ ಹಾಗೂ ಉನ್ನತ ವ್ಯಾಸಂಗದ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು. ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಪ್ರೊ.ದಿನೇಶ್ ಎಂ. ಪ್ತಾಸ್ತಾವಿಕ ಮಾತುಗಳಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಂಚಾಲಕಿ ಪ್ರೊ.ಸುಜಯಾ ಕೆ.ಎಸ್. ಉಪಸ್ಥಿತರಿದ್ದರು.

ಐಕ್ಯುಎಸಿ ಸಂಚಾಲಕಿ ಪ್ರೊ.ಸುಮನಾ ಬಿ. ಸ್ವಾಗತಿಸಿ ವಿದ್ಯಾರ್ಥಿ ಸಂಚಾಲಕಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಸಂಧ್ಯಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News