ಹಂಪಿ ಕನ್ನಡ ವಿವಿ ನೂತನ ಕುಲಪತಿಯಾಗಿ ಎಸ್.ಸಿ.ರಮೇಶ್ ನೇಮಕ

Update: 2019-02-21 16:01 GMT

ಬೆಂಗಳೂರು, ಫೆ. 21: ಬಳ್ಳಾರಿ ಜಿಲ್ಲೆ ಹೊಸಪೇಟೆಯ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ನೂತನ ಕುಲಪತಿಯನ್ನಾಗಿ ಎಸ್.ಪಿ.ರಮೇಶ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಹಂಪಿ ಕನ್ನಡ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿ ಡಾ.ಮಲ್ಲಿಕಾ ಎಸ್. ಘಂಟಿ ಅವರ ಅವಧಿ ಕೊನೆಗೊಂಡಿತ್ತು. ಸತತ ಮೂರು ಬಾರಿ ಅವರ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು.

ಇದೀಗ ಸರಕಾರದ ಶಿಫಾರಸ್ಸು ಆಧರಿಸಿ ವಿಶ್ವ ವಿದ್ಯಾಲಯಗಳ ಕುಲಾಧಿಪತಿಗಳು ಆಗಿರುವ ರಾಜ್ಯಪಾಲ ವಜುಬಾಯಿ ವಾಲಾ, ಹಂಪಿ ಕನ್ನಡ ವಿವಿಯ ಜಾನಪದ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಎಸ್.ಸಿ.ರಮೇಶ್ ಅವರನ್ನು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News