ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ : ಆರೋಪಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2019-02-21 16:15 GMT

ಬೆಂಗಳೂರು, ಫೆ.21: 2016ರಲ್ಲಿ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆ(ಕೋಕಾ)-2000ರಡಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸಬೇಕೆಂದು ಕೋರಿದ್ದ ಆರೋಪಿ ಎಸ್.ನಾರಾಯಣ ಅವರ ಅಜಿಯರ್ನ್ನು ಹೈಕೋರ್ಟ್ ವಜಾ ಮಾಡಿದೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರಶಾಸ್ತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಆರೋಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಅಪರಾಧಕ್ಕೆ ಸಹಕರಿಸಿದ್ದಾರೆ ಮತ್ತು ಪ್ರಚೋದನೆ ನೀಡಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಹೀಗಿರುವಾಗ ಅವರನ್ನು ಸಂಘಟಿತ ಅಪರಾಧದ ಅಡಿ ವಿಚಾರಣೆಗೆ ಗುರಿ ಮಾಡಿರುವ ಕ್ರಮ ಸರಿಯಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕೋಕಾ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಾರಾಯಣ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ 2017ರ ನವೆಂಬರ್ 20ರಂದು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News