×
Ad

ಸಂಸದೆ ಶೋಭಾ ವಿರುದ್ಧ ಅವಹೇಳನಕಾರಿ ಬರಹ: ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

Update: 2019-02-21 21:55 IST

ಉಡುಪಿ, ಫೆ.21: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಳ್ಳುತ್ತಿರುವ ಅವಹೇಳನಕಾರಿ ಬರಹದ ಕುರಿತಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಬರಹ ಪ್ರಕಟಿಸಿದ ಪ್ರವೀಣ್ ಯಕ್ಷಿಮಠ ಎಂಬಾತನ ವಿರುದ್ಧ ಉಡುಪಿ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ತಿಳಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಅಪಪ್ರಚಾರ ನಡೆಯುತಿದ್ದು, ಗೋಬ್ಯಾಕ್ ಶೋಭಾ ಹೆಸರಿನಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ದೂರಿನ ಪ್ರತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಹೆಗ್ಡೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News