ಅಪ್ರಾಪ್ತೆಯ ಅಪಹರಣ: ಆರೋಪಿ ಬಂಧನ

Update: 2019-02-21 17:32 GMT

ಮಂಗಳೂರು, ಫೆ.21: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕೂರಿನ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕೊರಂಗ್ರಪಾಡಿಯ ಸುದೇಶ್ ಬಂಧಿತ ಆರೋಪಿ.

ಶಾಲೆಗೆಂದು ತೆರಳಿದ ಅಪ್ರಾಪ್ತೆ ಫೆ.16ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಫೆ. 20ರಂದು ಕೊರಂಗ್ರಪಾಡಿಯಲ್ಲಿ ಆರೋಪಿ ಜತೆ ಇದ್ದ ಆಕೆಯನ್ನು ಪತ್ತೆ ಮಾಡಿದ ಪೊಲೀಸರು, ಆಕೆಯನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದಾಗ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ತಿಳಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News