ವಸತಿರಹಿತ ಪರಿಶಿಷ್ಟ ಪಂಗಡಗಳಿಗೆ ಶೀಘ್ರ ನಿವೇಶನ ನೀಡಿ: ಅಧಿಕಾರಿಗಳಿಗೆ ಡಿಸಿ ನಿರ್ದೇಶನ

Update: 2019-02-21 18:11 GMT

ಮಡಿಕೇರಿ, ಫೆ.21: ವಸತಿ ರಹಿತ ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ನಿವೇಶನವನ್ನು ವಿಳಂಬ ಮಾಡದೆ ಹಂಚಿಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಸತಿ ರಹಿತ ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ನಿವೇಶನ ಒದಗಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಐಟಿಡಿಪಿ ಅಧಿಕಾರಿ ಶಿವಕುಮಾರ್, ಜಿಲ್ಲೆಯಲ್ಲಿ ವಸತಿ ರಹಿತ ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ನಿವೇಶನ ಒದಗಿಸಲು ಗುರುತಿಸಿರುವ ಜಾಗದ ಬಗ್ಗೆ ಮಾಹಿತಿ ನೀಡಿ ಬಿರುನಾಣಿ, ತೆರಾಲು, ಹೆಗ್ಗಳ, ರಾಂಪುರ ಗ್ರಾಮಗಳ ಜಾಗದಲ್ಲಿ ಇರುವ ತೊಡಕುಗಳ ಬಗೆ್ಗ ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಈಗಾಗಲೇ ಗುರುತಿಸಿರುವ ಜಾಗದಲ್ಲಿನ ಅಡೆತೆಡೆಗಳನ್ನು ಜಂಟಿ ಸರ್ವೇ ಕಾರ್ಯ ನಡೆಸಿ ಇರುವ ಸಮಸ್ಯೆಯನ್ನು ಬಗೆಹರಿಸಿ ಅರ್ಹ ಫಲಾನುಭವಿಗಳಿಗೆ ಸೂಕ್ತ ಜಶಗದಲ್ಲಿ ನಿವೇಶನ ಹಂಚಿಕೆ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಜವರೇಗೌಡ, ತಹಶೀಲ್ದಾರ್ ಗೋವಿಂದರಾಜು, ತಾಪಂ ಇಒಗಳು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News