ಜೆಡಿಎಸ್ ವರಿಷ್ಠ ದೇವೇಗೌಡರೊಂದಿಗೆ ದಿನೇಶ್ ಗುಂಡೂರಾವ್ ಸಮಾಲೋಚನೆ

Update: 2019-02-21 18:30 GMT

ಬೆಂಗಳೂರು, ಫೆ. 21: ಲೋಕಸಭೆ ಚುನಾವಣೆ ಸೀಟು ಹಂಚಿಕೆ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಾಥಮಿಕ ಸಮಾಲೋಚನೆ ನಡೆಸಿದರು.

ಗುರುವಾರ ಇಲ್ಲಿನ ಪದ್ಮನಾಭನಗರದಲ್ಲಿನ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ದಿನೇಶ್ ಗುಂಡೂರಾವ್ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು ಎಂದು ಗೊತ್ತಾಗಿದೆ.

ಆ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ ಸೀಟು ಹಂಚಿಕೆ ಸಂಬಂಧ ದೇವೇಗೌಡ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದರು.

ಚರ್ಚೆಯ ಬಳಿಕ ಸೀಟು ಹಂಚಿಕೆ ಸೂತ್ರದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್‌ಗೆ ಮಾಹಿತಿ ರವಾನಿಸಲಾಗುವುದು. ಆ ಬಳಿಕ ದೇವೇಗೌಡ ಹಾಗೂ ರಾಹುಲ್ ಗಾಂಧಿ ಚರ್ಚಿಸಿ ಸೀಟು ಹಂಚಿಕೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News