ಚೀನಾ: ಚೂರಿ ದಾಳಿಯಲ್ಲಿ 11 ಮಂದಿಗೆ ಗಾಯ

Update: 2019-02-21 19:19 GMT

ಬೀಜಿಂಗ್, ಫೆ. 21: ಮಧ್ಯ ಚೀನಾದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಚೂರಿಯಿಂದ ಇರಿದು 11 ಮಂದಿಯನ್ನು ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

33 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳು ಸೇರಿದ್ದಾರೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ದಾಳಿಕೋರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ ಎಂದು ಅವನ ಕುಟುಂಬ ಸದಸ್ಯರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News