ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷ ನೇಮಕ

Update: 2019-02-22 13:31 GMT

ಬೆಂಗಳೂರು, ಫೆ.22: ರಾಜ್ಯ ಸರಕಾರವು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಅಕ್ರಮ್ ಪಾಷ, ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾಗಿದ್ದ ಅಕ್ರಮ್ ಪಾಷ ಅವರನ್ನು ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ವಿ.ವೆಂಕಟೇಶ್ ಅವರನ್ನು ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯನ್ನಾಗಿ, ರಾಜ್ಯ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಕೃಷ್ಣ ಬಾಜ್‌ಪೈ ಅವರನ್ನು ಹಾವೇರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News