ನಾಗರತ್ನ ಜೊತೆ ಜೀವನ ನಡೆಸಲು ಸಾಧ್ಯವಿಲ್ಲ: ನಟ ದುನಿಯಾ ವಿಜಯ್

Update: 2019-02-22 12:58 GMT

ಬೆಂಗಳೂರು, ಫೆ.22: ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ಪತ್ನಿ ನಾಗರತ್ನ ಜೊತೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ನಟ ದುನಿಯಾ ವಿಜಯ್ ಹೇಳಿರುವುದಾಗಿ ತಿಳಿದುಬಂದಿದೆ.

ಮೊದಲ ಪತ್ನಿ ನಾಗರತ್ನ ವಿಜಯ್ ವಿರುದ್ಧ ದೂರು ನೀಡಿದ ಸಂಬಂಧ ಶುಕ್ರವಾರ ನಗರದ ಕೆಜಿ ರಸ್ತೆಯಲ್ಲಿರುವ ರಾಜ್ಯ ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಹಿಳಾ ಆಯೊಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ನೋಟಿಸ್ ನೀಡಿದ್ದರು.

ಈ ಸಂಬಂಧ ಸುಮಾರು 1 ಗಂಟೆಗೂ ಹೆಚ್ಚು ಕಾಲ ವಿಜಯ್ ವಿಚಾರಣೆ ಎದುರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯ್, ಘಟನೆ ಸಂಬಂಧ ಮಹಿಳಾ ಆಯೋಗದವರು ಕೆಲವೊಂದು ದಾಖಲೆಗಳನ್ನು ಕೇಳಿದ್ದಾರೆ. ಅವರು ಕೇಳಿದ ಎಲ್ಲ ದಾಖಲೆಗಳನ್ನು ಶೀಘ್ರದಲ್ಲೇ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.

ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ, ವೈಯಕ್ತಿಕ ಮಾಹಿತಿ ನೀಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಕೂಡಾ ತನಿಖೆಗೆ ಸಹಕಾರ ನೀಡುತ್ತೇನೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News