ಹಿರಿಯ ನಿರ್ದೇಶಕ ಕೋಡಿರಾಮಕೃಷ್ಣ ನಿಧನ

Update: 2019-02-22 13:14 GMT

ಬೆಂಗಳೂರು, ಫೆ.22: ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ತೆಲುಗು ಚಿತ್ರನಿರ್ದೇಶಕ ಕೋಡಿರಾಮಕೃಷ್ಣ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ನಿರ್ದೇಶನ ಮಾಡಿರುವ ಕೋಡಿ ರಾಮಕೃಷ್ಣ, ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಜನಿಸಿದ್ದರು. ಇವರ ನಿಧನಕ್ಕೆ ಚಲನಚಿತ್ರ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇವರು ನಿರ್ದೇಶನದ ಅರುಂಧತಿ ಚಿತ್ರ ಸೂಪರ್ ಹಿಟ್ ಆಗಿತ್ತು. ಇವರ ಕೊನೆಯ ಚಿತ್ರ, ಕನ್ನಡದ ನಾಗರಹಾವು 2016ರಲ್ಲಿ ಬಿಡುಗಡೆಯಾಗಿತ್ತು. ರಮ್ಯ ನಟಿಸಿದ್ದ ಈ ಚಿತ್ರದಲ್ಲಿ ಗ್ರಾಫಿಕ್ಸ್ ಮೂಲಕ ವಿಷ್ಣುವರ್ಧನ್ ಅವರನ್ನು ಮರುಸೃಷ್ಟಿ ಮಾಡಲಾಗಿತ್ತು. ರಾಮಕೃಷ್ಣ ಅವರಿಗೆ ಫಿಲ್ಮ್ ಫೇರ್ ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿಗಳು ಅರಸಿ ಬಂದಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News