ಹಿ.ಪ್ರದೇಶದ ಮಾಜಿ ಸಿ.ಎಂ.ಸಿಂಗ್ ವಿರುದ್ಧ ಈ.ಡಿ.ಯಿಂದ ಪೂರಕ ಆರೋಪ ಪಟ್ಟಿ ಸಲ್ಲಿಕೆ

Update: 2019-02-22 15:04 GMT

ಹೊಸದಿಲ್ಲಿ,ಫೆ.22: ಜಾರಿ ನಿರ್ದೇಶನಾಲಯ(ಈ.ಡಿ.)ವು ಶುಕ್ರವಾರ ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ವಿರುದ್ಧ ಪೂರಕ ಆರೋಪ ಪಟ್ಟಿಯನ್ನು ಸಲ್ಲಿಸಿದೆ.

ಮಾ.18ರಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ವಿಶೇಷ ನ್ಯಾಯಾಧೀಶ ಅರುಣ ಭಾರದ್ವಾಜ್ ತಿಳಿಸಿದರು.

ಈ ವಿಷಯದಲ್ಲಿ ಸಿಬಿಐ ದಾಖಲಿಸಿರುವ ಪ್ರತ್ಯೇಕ ಪ್ರಕರಣದಲ್ಲಿ ಸಿಂಗ್,ಅವರ ಪತ್ನಿ ಮತ್ತು ಇತರರ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

 ಕೇಂದ್ರದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಸಿಂಗ್ ಅವರು ಸುಮಾರು 10 ಕೋ.ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಸಂಪಾದಿಸಿದ್ದರು ಎಂದು ಸಿಬಿಐ ಆರೋಪಿಸಿದೆ. ಸಿಬಿಐ ಪ್ರಕರಣದ ಆಧಾರದಲ್ಲಿ ಈ.ಡಿ.ಪ್ರಕರಣವನ್ನು ದಾಖಲಿಸಿಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News