ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2019-02-22 15:37 GMT

ಕೋಲಾರ,ಫೆ.22: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಬ್ಬಣಿ ಗ್ರಾಮದಲ್ಲಿ ನಡೆದಿದೆ.

ಭೂಮಿಕಾ(19) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕೋಲಾರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಭೂಮಿಕಾ ಪ್ರೇಮ ವೈಫಲ್ಯ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ.

ಆತ್ಮಹತ್ಯೆಗೂ ಮುನ್ನ ಭೂಮಿಕಾ ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ/.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News