ಮೈಸೂರು ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

Update: 2019-02-22 15:45 GMT

ಮೈಸೂರು,ಫೆ.22: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಸಿ ಬಾಂಬ್ ಕರೆಯೊಂದು ಬಂದಿದ್ದು, ಕೆಲ ಸಮಯ ಆತಂಕ ಸೃಷ್ಟಿಯಾದ ಘಟನೆ ನಡೆಯಿತು.

ಅನಾಮಿಕ ವ್ಯಕ್ತಿಯೋರ್ವ ಮೈಸೂರು ರೈಲ್ವೆ ನಿಲ್ದಾಣಾಧಿಕಾರಿಗಳಿಗೆ ಹುಸಿ ಬಾಂಬ್ ಕರೆ ಮಾಡಿದ್ದಾನೆ. ರೈಲ್ವೆ ನಿಲ್ದಾಣದ ಹೆಸರು ಹೇಳದೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಬೆಂಗಳೂರು ಕೇಂದ್ರ ರೈಲ್ವೇ ಕಂಟ್ರೋಲ್ ರೂಂಗೂ  ತಡರಾತ್ರಿ ಸುಮಾರು 1.30 ಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ ಎನ್ನಲಾಗಿದೆ.

ಕರೆ ಬಂದ ಹಿನ್ನೆಲೆಯಲ್ಲಿ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲೂ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಮೈಸೂರು ರೈಲ್ವೆ ನಿಲ್ದಾಣ ಹಾಗೂ ಎಲ್ಲಾ ರೈಲುಗಳಲ್ಲೂ ತಪಾಸಣೆ ಮಾಡಲಾಗಿದ್ದು, ಅದೃಷ್ಟವಶಾತ್ ಯಾವುದೇ ಬಾಂಬ್ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಬಗ್ಗೆ ರೈಲ್ವೇ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಕರೆ ಮಾಡಿದ ವ್ಯಕ್ತಿಯ ಫೋನ್ ನಂಬರ್ ಆಧರಿಸಿ ಆತನ ಮೇಲೆ ಕೇಸ್ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News