ಪುತ್ತೂರು : ಎಸ್‍ಡಿಪಿಐ ವತಿಯಿಂದ ಬಾಬರಿ ಮಸ್ಜಿದ್ ಎಕ್ಸ್ ಪೋ, ಸಾಂಸ್ಕೃತಿಕ ಕಾರ್ಯಕ್ರಮ

Update: 2019-02-22 15:56 GMT

ಪುತ್ತೂರು, ಫೆ. 22: ಎಸ್ಡಿಪಿಐ ಪುತ್ತೂರು ವಿಧಾನಸಭಾ ಸಮಿತಿ ವತಿಯಿಂದ `ಬಾಬರಿ ಮಸ್ಜಿದ್ ಮರಳಿ ಪಡೆಯೋಣ ಭಾರತವನ್ನು ಮರಳಿ ಗಳಿಸೋಣ' ಎಂಬ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಬಾಬರಿ ಮಸ್ಜಿದ್ ಎಕ್ಸ್ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸ್ಜಿದ್ ಮುಂಭಾಗದಲ್ಲಿ ಶುಕ್ರವಾರ ನಡೆಯಿತು.

ಬಡಕ್ಕೊಡಿ ಜುಮಾ ಮಸೀದಿ ಖತೀಬ್ ಅಬ್ದುಲ್ ರಹಿಮಾನ್ ಫೈಝೀ ಎಕ್ಸ್ ಪೋ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‍ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ  ಸಮಿತಿ ಅಧ್ಯಕ್ಷ ಅಬೂಬಕರ್ ಸಿದ್ದೀಕ್ ಕೆ.ಎ ರವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣಗೈದರು. 

ಎಸ್‍ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಲತೀಫ್ ಪುತ್ತೂರು ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ಪುತ್ತೂರು  ವಿಧಾನ ಸಭಾ ಸಮಿತಿ ಪ್ರಧಾನ ಕಾರ್ಯದರ್ಶಿ ಹಮೀದ್ ಮೆಜೆಸ್ಟಿಕ್, ಕಾರ್ಯದರ್ಶಿ ಅಶ್ರಫ್ ಬಾವು,ಉಪಾಧ್ಯಕ್ಷರಾದ ಇಬ್ರಾಹಿಂ ಸಾಗರ್,  ತಾಲೂಕು ಸಮಿತಿ ಸದಸ್ಯರಾದ ಶಾಕೀರ್ ಅಳಕೆಮಜಲ್, ಪಿ.ಬಿ.ಕೆ ಮಹಮ್ಮದ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್  ರಿಝ್ವಾನ್ ,ಸಿಟಿ ಡಿವಿಜನ್ ಅಧ್ಯಕ್ಷರಾದ ಯಹ್ಯಾ ಕೂರ್ನಡ್ಕ, ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಸಾಬ್, ಉದ್ಯಮಿ ಅಬ್ದುಲ್ ಹಮೀದ್ ಕೂರ್ನಡ್ಕ ಮತ್ತಿತರರು ಉಪಸ್ಥಿತರಿದ್ದರು.

ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ  ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ನಗರ ಸಮಿತಿ ಅದ್ಯಕ್ಷ ಬಶೀರ್ ಕೂರ್ನಡ್ಕ  ಸ್ವಾಗತಿಸಿದರು. ಉಸ್ಮಾನ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News