ಫೆ. 24: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ

Update: 2019-02-22 17:56 GMT

ಮಂಗಳೂರು, ಫೆ.22: ಭಾರತೀಯ ಕೃಷಿ ಸಂಶೋದನಾ ಪರಿಷತ್‌ನ ಅಂಗಸಂಸ್ಥೆಯಾದ ದ.ಕ.ಜಿಲ್ಲೆಯ ಏಕೈಕ ಕೃಷಿ ವಿಜ್ಞಾನ ಕೇಂದ್ರವು ಫೆ.24ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಉದ್ಘಾಟನೆಯ ನೇರ ಪ್ರಸಾರದ ಇೀಕ್ಷಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ನೇರ ಪ್ರಸಾರಕ್ಕೆ ಚಾಲನೆ ನೀಡಲಿದ್ದು, ಶಾಸಕ ವೇದವ್ಯಾಸ ಕಾಮತ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಎ.ಟಿ. ರಾಮಚಂದ್ರ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News