ಚಿರತೆ ದಾಳಿ: ಇಬ್ಬರು ಕಾರ್ಮಿಕರಿಗೆ ಗಾಯ

Update: 2019-02-22 18:54 GMT

ಮಂಡ್ಯ, ಫೆ.22: ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ ನಡೆದಿದ್ದು, ಮಡುವಿನಕೋಡಿ ಗ್ರಾಮದ ಸುರೇಶ್ ಮತ್ತು ದಿನೇಶ್ ಗಂಭೀರ ಗಾಯಗೊಂಡಿದ್ದಾರೆ. 

ಶುಕ್ರವಾರ ಬೆಳಗ್ಗೆ ಚಿಕ್ಕೋಸಹಳ್ಳಿ ಗ್ರಾಮದ ರೈತ ರಾಮೇಗೌಡರ ಜಮೀನಿನ ಕಬ್ಬು ಕಟಾವು ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಗೆ ಕ್ರಮವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News