ಉಡುಪಿ: ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅಧಿಕಾರ ಸ್ವೀಕಾರ

Update: 2019-02-23 07:33 GMT

ಉಡುಪಿ, ಫೆ.23: ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕಿಯಾಗಿ ನಿಶಾ ಜೇಮ್ಸ್ ಫೆ.23ರಂದು ಅಧಿಕಾರ ವಹಿಸಿಕೊಂಡರು.

ಎಸ್ಪಿ ಕಚೇರಿಗೆ ಆಗಮಿಸಿದ ನಿಶಾ ಜೇಮ್ಸ್ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಅವರನ್ನು ಸ್ವಾಗತಿಸಿದ ನಿಗರ್ಮನ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರಗಿ, ಕಚೇರಿಯಲ್ಲಿ ಅಧಿಕಾರವನ್ನು ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ನೂತನ ಎಸ್ಪಿ ನಿಶಾ ಜೇಮ್ಸ್, ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಅಕ್ರಮ ಚಟುವಟಿಕೆ, ಕೋಮು ಸಂಘರ್ಷ, ರೌಡಿಸಂಗಳ ವಿರುದ್ಧ ನಿಷ್ಪಕ್ಷವಾಗಿ ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು.

ಮಹಿಳೆಯರಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅದಕ್ಕಾಗಿ ಜನರ ಸಹಕಾರ ಮುಖ್ಯವಾಗಿ ಬೇಕು. ಪ್ರಾಮಾಣಿಕವಾಗಿ ಹಾಗೂ ನಿಷ್ಪಕ್ಷವಾಗಿ ಕೆಲಸ ಮಾಡಲಾಗುವುದು. ಅಧಿಕಾರಿಗಳು ಸಿಬ್ಬಂದಿಯೆಲ್ಲ ಸೇರಿ ಕೆಲಸ ಮಾಡಬೇಕಾಗುತ್ತದೆ. ಅದರಲ್ಲಿ ಯಶಸ್ವಿಯಾಗುತ್ತೇವೆ. ಫೋನ್ ಇನ್ ಕಾರ್ಯಕ್ರಮ ಸೇರಿದಂತೆ ಹಿಂದಿನ ಎಸ್ಪಿ ಮಾಡಿರುವ ಒಳ್ಳೆಯ ಕೆಲಸಗಳನ್ನು ಮುಂದುವರಿಸುವುದಾಗಿ ಅವರು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕುಮಾರಚಂದ್ರ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಕೃಷ್ಣಕಾಂತ್, ವೃತ್ತ ನಿರೀಕ್ಷಕರು, ಉಪ ನಿರೀಕ್ಷಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News