ಬ್ಯಾರಿ ಅಕಾಡಮಿ - ಬ್ಯಾರಿ ಸಂಘಸಂಸ್ಥೆಗಳ ಸಮ್ಮಿಲನ

Update: 2019-02-23 12:30 GMT

ಮಂಗಳೂರು, ಫೆ. 23: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮಂಗಳೂರಿನಲ್ಲಿ ವಿಶ್ವ ಬ್ಯಾರಿ ಸಮ್ಮೇಳನ ಆಯೋಜಿಸುವ ಕುರಿತು ಚರ್ಚಿಸಲು ಶನಿವಾರ ನಗರದಲ್ಲಿ ಬ್ಯಾರಿ ಅಕಾಡಮಿ ಮತ್ತು ಬ್ಯಾರಿ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಮ್ಮಿಲನ ನಡೆಯಿತು.

ಅಕಾಡಮಿಯ ಅಧ್ಯಕ್ಷ ಕರಂಬಾರ್ ಮುಹಮದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್, ಉಪಾಧ್ಯಕ್ಷ ಹಾಜಿ‌ ಇಬ್ರಾಹೀಂ ಕೋಡಿಜಾಲ್, ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ದ.ಕ. ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್, ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ., ಹಿದಾಯ ಫೌಂಡೇಶನ್‌ನ ಅಧ್ಯಕ್ಷ ಮನ್ಸೂರ್ ಅಹ್ಮದ್, ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಜಿ. ಮುಹಮ್ಮದ್ ಹನೀಫ್, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಂಚಾಲಕ ಯು.ಎ. ಕಾಸಿಮ್ ಉಳ್ಳಾಲ್, ಬ್ಯಾರಿ ಕಲಾರಂಗದ ಅಧ್ಯಕ್ಷ ಹಾಜಿ ಅಬ್ದುಲ್ ಅಝೀಝ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ. ಅಸ್ಲಂ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಅಧ್ಯಕ್ಷ ಜೆ. ಹುಸೈನ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಅಧ್ಯಕ್ಷ ರಿಯಾಝ್ ಕಣ್ಣೂರು, ದೇರಳಕಟ್ಟೆಯ ‘ಮೇಲ್ತೆನೆ’ಯ ಅಧ್ಯಕ್ಷ ಹಂಝ ಮಲಾರ್, ಕರ್ನಾಟಕ ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ಸದಸ್ಯ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ‌ ನಿರೂಪಿಸಿದರು.

ಮಂಗಳೂರಿನಲ್ಲಿ ವಿಶ್ವ ಬ್ಯಾರಿ ಸಮ್ಮೇಳನ ನಡೆಸಬೇಕು, ಬ್ಯಾರಿ ಸಾಹಿತ್ಯ ಭವನ ನಿರ್ಮಿಸಬೇಕು, ಬ್ಯಾರಿ ಆಂದೋಲನದ ರೂವಾರಿ ಮರ್ಹೂಂ ರಹೀಂ ಟೀಕೆ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿ ಬ್ಯಾರಿ ಪ್ರತಿಭಾ ಸ್ಪರ್ಧೆ ಏರ್ಪಡಿಸಿ ಪುರಸ್ಕರಿಸಬೇಕು, ಭಾಷಾ ಅಲ್ಪಸಂಖ್ಯಾತರ ಪಟ್ಟಿಯಲ್ಲಿ ಬ್ಯಾರಿ ಭಾಷೆಯನ್ನು ಸೇರಿಸಬೇಕು ಇತ್ಯಾದಿ‌ ಸಲಹೆಗಳು ಕೇಳಿ ಬಂದಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News