ಕಟಪಾಡಿ: ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

Update: 2019-02-23 13:29 GMT

ಕಾಪು, ಫೆ.23: ಶಿಕ್ಷಣ ಇಲಾಖೆ ಈಗಾಗಲೇ ಮಕ್ಕಳಿಗೆ ಕರಾಟೆ ಶಿಕ್ಷಣದ ಬಗ್ಗೆ ಹೆಚ್ಚಿನ ಪ್ರೊತ್ಸಾಹ ನೀಡುತ್ತಿದ್ದು, 9ನೇ ತರಗತಿಯ ಎಲ್ಲಾ ಹೆಣ್ಣು ಮಕ್ಕಳಿಗೂ ಕಡ್ಡಾಯವಾಗಿ ಕರಾಟೆ ಕಲಿಯುವ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರೊ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಕರ್ನಾಟಕ ಕರಾಟೆ ಡೊ ಸ್ಪೋರ್ಟ್ಸ್ ಅಸೋಸಿಯೇಶನ್ ಮತ್ತು ಉಡುಪಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ಶನಿವಾರ ನಡೆದ ಎರಡು ದಿನಗಳ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡು ತಿದ್ದರು.

ವಿದ್ಯಾರ್ಥಿ ದೆಸೆಯಲ್ಲಿಯೇ ಕರಾಟೆ ಕಲೆಯನ್ನು ಕರಗತ ಮಾಡಿಕೊಳ್ಳುವುದ ರಿಂದ ಆತ್ಮರಕ್ಷಣೆಯ ಜೊತೆಗೆ ಕೈಕಾಲು, ಕಣ್ಣು ಶೀಘ್ರವಾಗಿ ಕೆಲಸ ಮಾಡುತ್ತದೆ. ಇದರಿಂದ ದೈಹಿಕ, ಮಾನಸಿಕ ಬೆಳವಣಿಗೆಯಾಗಿ ಸದೃಢ ದೈಹಿಕ ಆರೋಗ್ಯಕ್ಕೆ ಪೂರಕವಾಗುತ್ತದೆ ಎಂದು ಅವರು ಹೇಳಿದರು.

ಸ್ಪರ್ಧೆಯನ್ನು ಉದ್ಘಾಟಿಸಿದ ಶ್ರೀವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಶಂಕರ ಪೂಜಾರಿ ಮಾತನಾಡಿ, ಕರಾಟೆ ಶಿಕ್ಷಣ ಆತ್ಮರಕ್ಷಣೆಯ ಜೊತೆಗೆ ದೈಹಿಕ ಮಾನಸಿಕ ಆರೋಗ್ಯಕ್ಕೂ ಪೂರಕವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ನಿತ್ಯಾ ನಂದ ಕೆಮ್ಮಣ್ಣು ವಹಿಸಿದ್ದರು. ರಾಜ್ಯ ಕರಾಟೆ ಡೊ ಸ್ಪೋರ್ಟ್ಸ್ ಅಸೋಸಿ ಯೇಶನ್ ಪ್ರಧಾನ ಕಾರ್ಯದರ್ಶಿ ಕೀರ್ತಿ, ಕೆಎಎಫ್ ರೆಫ್ರಿ ಕಮಿಷನ್ ಸದಸ್ಯ ಜೆ.ಕೆ.ಡೊಮೆನಿಕ್ ಸಾವಿಯೊ, ವಿಶ್ವನಾಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಶಿವಾನಂದ್, ಉಪಾಧ್ಯಕ್ಷ ಸತೀಶ್ ಪೂಜಾರಿ ಬೆಳ್ಮನ್, ಎಕೆಐಎಫ್ ನಿರ್ಣಾ ಯಕ ಆಲ್ತಾಪ್ ಪಾಶಾ, ನದೀಂ ಮಂಗಳೂರು, ಕಿರಣ್ ಕುಂದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೋಹಿತಾಕ್ಷ, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಬಿ.ಆಚಾರ್ಯ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕರಾಟೆ ಸಂಘದ ಅಧ್ಯಕ್ಷ ರವಿ ಕೊಟ್ಯಾನ್ ಸ್ವಾಗತಿಸಿ ವಂದಿಸಿ ದರು. ರಮೇಶ್ ಕರ್ಕೇರಾ ಉಗ್ಗೆಲ್‌ಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಸ್ಫರ್ಧೆಯಲ್ಲಿ 1200ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News