ಸಂತ ಅಲೋಶಿಯಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Update: 2019-02-23 13:56 GMT

ಮಂಗಳೂರು, ಫೆ.23: ಸಂತ ಅಲೋಶಿಯಸ್ ಕಾಲೇಜಿನ ಯೂತ್ ರೆಡ್ ಕ್ರಾಸ್ ಯೂನಿಟ್, ವೆನ್ಲಾಕ್ ಜಿಲಾಸ್ಪತ್ರೆಯ ಬ್ಲಡ್ ಬ್ಯಾಂಕ್ ಹಾಗೂ ಕೆಎಂಸಿಯ ಬ್ಲಡ್ ಬ್ಯಾಂಕ್‌ಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲ ರೆ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಅಧ್ಯಕ್ಷತೆ ವಹಿಸಿದ್ದರು. ವೆನ್ಲಾಕ್ ಜಿಲಾಸ್ಪತ್ರೆಯ ಬ್ಲಡ್ ಬ್ಯಾಂಕ್‌ನ ಮುಖ್ಯಸ್ಥರಾದ ಡಾ.ಶರತ್ ಕುಮಾರ್ ಹಾಗೂ ಭವಾನಿಶಂಕರ್ ಉಪಸ್ಥಿತರಿದ್ದರು. ಕಾಲೇಜಿನ ಯೂತ್ ರೆಡ್ ಕ್ರಾಸ್‌ನ ಅಧ್ಯಕ್ಷರಾದ ಪ್ರೇಮಲತ ಶೆಟ್ಟಿ ಹಾಗೂ ಅರ್ಜುನ್ ಪ್ರಕಾಶ್ ಈ ಶಿಬಿರದಲ್ಲಿ ಸಹಕರಿಸಿದರು.

ಮಂಗಳೂರಿನ ಆಸ್ಪತ್ರೆಗಳ ಬ್ಲಡ್ ಬ್ಯಾಂಕ್‌ಗಳಲ್ಲಿ ರಕ್ತದ ಕೊರತೆಯುಂಟಾಗಿದ್ದು, ರಕ್ತ ಸಂಗ್ರಹಣೆಯ ಕಾರ್ಯವನ್ನು ಮಾಡಬೇಕಾದುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದು, 180 ಯೂನಿಟ್‌ ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News