ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ: ಮಹಮ್ಮದ್ ನವಾಝ್ ರಿಗೆ ಸನ್ಮಾನ

Update: 2019-02-23 17:35 GMT

ಪುತ್ತೂರು, ಫೆ. 23: ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪುತ್ತೂರು ದರ್ಬೆ ನಿವಾಸಿ ದಿ.ಉಸ್ಮಾನ್ ಹಾಜಿಯವರ ಪುತ್ರ ಮಹಮ್ಮದ್ ನವಾಝ್ ಅವರನ್ನು  ಪುತ್ತೂರು ಬಾರ್ ಎಸೋಸಿಯೇಶನ್ ವತಿಯಿಂದ ಶನಿವಾರ ಪುತ್ತೂರು ಕೋರ್ಟು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್  ಸನ್ಮಾನಿಸಿದರು. 

ಈ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಹಾಗೂ ದ.ಕ.ಜಿಲ್ಲಾ ನ್ಯಾಯಾಲಯಗಳ ಆಡಳಿತಾತ್ಮಕ ನ್ಯಾಯಾಧೀಶ ಬಿ. ವೀರಪ್ಪ, ಸರ್ವೋಚ್ಚ ನ್ಯಾಯಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್, ಕೇರಳ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಎಚ್. ನಗರೇಶ್, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ, ರಾಜ್ಯ ವಕೀಲರ ಪರಿಷತ್ ಸದಸ್ಯ ಪಿ.ಪಿ. ಹೆಗ್ಡೆ, ಪುತ್ತೂರು 5ನೇ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಧೀಶ ಶಿವಣ್ಣ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್, ಪುತ್ತೂರು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಲತಾ ದೇವಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ.ಪ್ರಕಾಶ್, ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ನ್ಯಾಯಾಧೀಶ ಕಿಶನ್ ಮಡಲಗಿ, ಹಿರಿಯ ನ್ಯಾಯವಾದಿ ಎನ್ ಸುಬ್ರಹ್ಮಣ್ಯಂ ಕೊಳತ್ತಾಯ, ಬಾರ್ ಎಸೋಸಿಯೇಶನ್‍ನ ಮಾಜಿ ಅಧ್ಯಕ್ಷ ಭಾಸ್ಕರ ಕೋಡಿಂಬಾಳ, ಹಾಲಿ ಕಾರ್ಯದರ್ಶಿ ಮಂಜುನಾಥ ಎನ್.ಎಸ್. ಸಾಯಿರಾ ಜುಬೇರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News