ಫೆ. 28: ಬ್ಯಾರಿ ಅಧ್ಯಯನ ಪೀಠ ಉದ್ಘಾಟನೆ
ಮಂಗಳೂರು, ಫೆ.24: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ‘ಬ್ಯಾರಿ ಅಧ್ಯಯನ ಪೀಠ’ದ ಉದ್ಘಾಟನೆಯು ಕಾರಣಾಂತರದಿಂದ ಎರಡು ಬಾರಿ ಮುಂದೂಡಲ್ಪಟ್ಟಿದ್ದರೂ ಇದೀಗ ಮೂರನೆ ಬಾರಿಯ ದಿನಾಂಕ ನಿಗದಿಯಾಗಿದೆ. ಫೆ.28ರಂದು ಅಪರಾಹ್ನ 2:30ಕ್ಕೆ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಬ್ಯಾರಿ ಅಧ್ಯಯನ ಪೀಠ ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ. ಈಶ್ವರ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕಿ ಉಳೆಪ್ಪಾಡಿ, ಉಮನಾಥ ಕೋಟ್ಯಾನ್, ಎಸ್. ಅಂಗಾರ, ಹರೀಶ್ ಪೂಂಜಾ, ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಕೆ.ಹರೀಶ್ ಕುಮಾರ್, ಎಂ.ಎಲ್. ಭೋಜೇಗೌಡ, ಆಯನೀರು ಮಂಜನಾಥ್, ಮೇಯರ್ ಭಾಸ್ಕರ ಕೆ., ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಸುರೇಂದ್ರ ರಾವ್, ಪತ್ರಕರ್ತ ಬಿ.ಎಂ.ಹನೀಫ್, ಬ್ಯಾರಿ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಕರಂಬಾರ್, ತುಳು ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಕೊಂಕಣಿ ಅಕಾಡಮಿಯ ಅಧ್ಯಕ್ಷ ಆರ್.ಪಿ.ನಾಯ್ಕ, ಅರೆಭಾಷೆ ಮತ್ತು ಸಂಸ್ಕೃತಿ ಅಕಾಡಮಿಯ ಅಧ್ಯಕ್ಷ ಪಿ.ಸಿ.ಜಯರಾಮ, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಕೊಣಾಜೆ ಗ್ರಾಪಂ ಅಧ್ಯಕ್ಷ ನಝರ್ ಷಾ.ಪಟ್ಟೋರಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷರಾದ ಎಂ.ಬಿ. ಅಬ್ದುಲ್ ರಹ್ಮಾನ್, ರಹೀಂ ಉಚ್ಚಿಲ್, ಬಿ.ಎ.ಮುಹಮ್ಮದ್ ಹನೀಫ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.