ಉಳ್ಳಾಲ ದರ್ಗಾದಲ್ಲಿ ಉಚಿತ ವೈದ್ಯಕೀಯ ಶಿಬಿರ
ಉಳ್ಳಾಲ, ಫೆ.24:ಕೇಂದ್ರ ಜುಮಾ ಮಸೀದಿ ಮತ್ತು ಹಝ್ರತ್ ಸೈಯದ್ ಮದನಿ ದರ್ಗಾ ಸಮಿತಿಯ ವತಿಯಿಂದ ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನ ಸಹಕಾರದಲ್ಲಿ ರವಿವಾರ ದರ್ಗಾ ವಠಾರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.
ಸೈಯದ್ ಮದನಿ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಣಚೂರು ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್ ಉದ್ಘಾಟಿಸಿದರು. ಸಹಾಯಕ ಖಾಝಿ ಅಬ್ದುಲ್ ರವೂಫ್ ಮುಸ್ಲಿಯಾರ್ ದುಆಗೈದರು. ಅರಬಿಕ್ ಕಾಲೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿ ತೋಡಾರ್, ಖತೀಬ್ ಅಬ್ದುಲ್ ಅಝೀಝ್ ಬಾಖವಿ, ಮುಫತ್ತಿಷ್ ಸುಲೈಮಾನ್ ಸಖಾಫಿ, ಪ್ರಾಂಶುಪಾಲ ಝೈನ್ ಸಖಾಫಿ, ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ, ಪದಾಧಿಕಾರಿಗಳಾದ ಬಾವ ಮುಹಮ್ಮದ್, ಯು.ಕೆ.ಇಲ್ಯಾಸ್, ನೌಷಾದ್ ಮೇಲಂಗಡಿ, ಯು.ಟಿ.ಇಲ್ಯಾಸ್, ಅಝಾದ್ ಇಸ್ಮಾಯೀಲ್, ಫಾರೂಕ್ ಉಳ್ಳಾಲ್, ಆಸಿಫ್ ಅಬ್ದುಲ್ಲಾ, ಅಮೀರ್, ಇಬ್ರಾಹೀಂ ಕಕ್ಕೆತೋಟ, ಅಯೂಬ್ ಮಂಚಿಲ, ಅಝಾದ್ ಇಸ್ಮಾಯೀಲ್ ಉಪಸ್ಥಿತರಿದ್ದರು.
ಎವರೆಸ್ಟ್ ಮುಸ್ತಫಾ ಸ್ವಾಗತಿಸಿದರು. ಸಲಾಂ ಮದನಿ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.