×
Ad

​ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕೃಷಿ ಪುನಶ್ಚೇತನಕ್ಕೆ ಪೂರಕ -ವೇದವ್ಯಾಸ ಕಾಮತ್

Update: 2019-02-24 18:54 IST

ಮಂಗಳೂರು, ಫೆ. 24: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕೃಷಿ ಪುನಶ್ಚೇತನಕ್ಕೆ ಪೂರಕ ಯೋಜನೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ಬೀದರ್,ಭಾರತೀಯ ಕೃಷಿ ಸಂಶೋಧನಾ ಪರಿಷತ್ ಮತ್ತು ಕೃಷಿ ವಿಜ್ಞಾನ ಕೇಂದ್ರ ದ.ಕ ಮಂಗಳೂರು ಇದರ ವತಿಯಿಂದ ಎಕ್ಕೂರು ನಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 2019ರ ಪ್ರಧಾನ ಮಂತ್ರಿ ಉದ್ಘಾಟನಾ ಕಾರ್ಯಕ್ರಮದ ನೇರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ದೇಶದ ರೈತರಿಗೆ ಭರವಸೆ ನಿಡುವ ಆದಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ವರ್ಷ 7 ಸಾವಿರ ಕೋಟಿ ರೂಗಳನ್ನು ಕಿಸಾನ್ ಸಮ್ಮಾನ್ ನಿಧಿಗೆ ಮೀಸಲಿಟ್ಟಿದೆ. ಇದರಿಂದಾಗಿ 2ಹೆಕ್ಟೇರ್‌ವರೆಗೆ ಕೃಷಿ ಭೂಮಿ ಹೊಂದಿರುವ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಯನ್ನು ನೇರ ವರಮಾನವಾಗಿ ದೊರೆಯಲಿದೆ.ಈ ಆದಾಯವನ್ನು ರೈತರಿಗೆ ತಲಾ 2000ದಂತೆ ಮೂರು ಕಂತುಗಳಲ್ಲಿ ಪಾವತಿಸಲಾಗುವುದು. 2018-19 ಸಾಲಿನಲ್ಲಿ 20,000 ಕೋಟಿ ರೂ ಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಕಳೆದ ಬಾರಿ ಇದ್ದ 58,080 ಕೋಟಿ ರೂ ನಿಂದ 2019-20ರ ಬಜೆಟ್‌ನಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಬಜೆಟ್‌ಹಂಚಿಕೆಯಲ್ಲಿ 1,41,174.37 ಕೋಟಿ ರೂ ಗಳಿಗೆ ಏರಿಕೆಯಾಗಿದೆ ಇದಕ್ಕಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುವುದಾಗಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ಭೂಮಿ ಕೃಷಿಯೇತರ ಉದ್ದೇಶಕ್ಕಾಗಿ ಬಳಕೆಯಾದ ಪರಿಣಾಮವಾಗಿ ಕೃಷಿ ಆಧಾರಿತ ಕಯಗಾರಿಕೆಗಳಿಗೆ ಕಚ್ಚಾ ವಸ್ತುಗಳು ಪೂರೈಕೆಯ ದೊಡ್ಡ ಸಮಸ್ಯೆ ಎದುರಾಗಿದೆ.ಈ ನಿಟ್ಟಿನಲ್ಲಿ ಉಳಿದಿರುವ ಕೃಷಿ ಭೂಮಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಹಾಗೂ ಕೃಷಿಕರಿಗೆ ಹೆಚ್ಚಿನ ಆರ್ಥಿಕ ಬೆಂಬಲ ನೈತಕ ಬೆಂಬಲ ನೀಡುವ ನಿಟ್ಟಿನಲ್ಲಿ ಸರಕಾರ ಆಸಕ್ತಿಹೊಂದಿದೆ ಎಂದು ವೇದವ್ಯಾಸ ಕಾಮತ್ ತಿಳಿಸಿದರು.

15,830 ರೈತರಿಗೆ ರೈತ ಸಮ್ಮಾನ್ ನಿಂದ ಸಹಾಯ:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ರೈತ ಸಮ್ಮಾನ್ ಯೋಜನೆಯಿಂದ ಈಗಾಗಲೆ 1898 ರೈತರು ಅರ್ಜಿ ಸಲ್ಲಿಸಿ ಯೋಜನೆಯಿಂದ ಸಹಾಯ ಪಡೆಯಲು ಅರ್ಹತೆಯನ್ನು ಹೊಂದಿದ್ದಾರೆ.ಜಿಲ್ಲೆಯಲ್ಲಿ 15,838 ರೈತರಿಗೆ ಈ ಯೋಜನೆಯಿಂದ ಮಾರ್ಚ್ ಒಳಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್‌ನಿಂದ ನಿಂದ ಸಹಾಯ ನೀಡುವ ಗುರಿ ಇದೆ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಯೋಜನೆಯ ಅರ್ಜಿ ಫಾರಂನ್ನು ಕೃಷಿಕರಿಗೆ ವಿತರಿಸುವ ಮೂಲಕ ಸಾಂಕೇತಿಕವಾಗಿ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.

ದೂರದರ್ಶನದಲ್ಲಿ ಪ್ರಾಧಾನ ಮಂತ್ರಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ನಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಬೃಹತ್‌ಟ.ವಿ.ಪರದೆಯ ಮೂಲಕ ಎಕ್ಕೂರಿನ ಕೃಷಿ ವಿಜ್ಞಾನಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಮಾರಂಭದಲ್ಲಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎ.ಟಿ,ರಾಮಚಂದ್ರ ನಾಯ್ಕೆ , ತೋಟಗಾರಿಕಾ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಪ್ರವೀಣ್, ಸಾಗರೋತ್ಪನ್ನ ರಫ್ತು ಪ್ರಾಧಿಕಾರ ಕಾರವಾರದ ಉಪ ನಿರ್ದೇಶಕ ವಿಜಯ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News