×
Ad

ಮೊದಲ ಟ್ವೆಂಟಿ-20: ಆಸ್ಟ್ರೇಲಿಯಕ್ಕೆ ಜಯ

Update: 2019-02-24 22:34 IST

ವಿಶಾಖಪಟ್ಟಣ,ಫೆ. 24: ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾ(3-16) ಉತ್ತಮ ದಾಳಿ ಸಂಘಟಿಸಿದ ಹೊರತಾಗಿಯೂ ಭಾರತ ತಂಡ ಆಸ್ಟ್ರೇಲಿಯ ವಿರುದ್ಧದ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಸೋಲುಂಡಿದೆ.

 ಗೆಲ್ಲಲು 127 ರನ್ ಗುರಿ ಪಡೆದ ಆಸ್ಟ್ರೇಲಿಯ ತಂಡ 20 ಓವರ್‌ಗಳಲ್ಲಿ 7 ಕಳೆದುಕೊಂಡು ಗೆಲುವಿನ ದಡ ಸೇರಿತು. ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್(56, 43 ಎಸೆತ6 ಬೌಂಡರಿ, 2 ಸಿಕ್ಸರ್) ಹಾಗೂ ಆರಂಭಿಕ ಆಟಗಾರ ಶಾರ್ಟ್(37) ತಂಡದ ಗೆಲುವಿಗೆ ನೆರವಾದರು. 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಲು ಕಾರಣರಾದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತ್ತು. ಕೆಎಲ್ ರಾಹುಲ್ 50 ರನ್ ಗಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News