×
Ad

ಮೀನುಗಾರರ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ

Update: 2019-02-24 22:42 IST

ಉಡುಪಿ, ಫೆ.24: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣದ ಶೀಘ್ರ ತನಿಖೆ ನಡೆಸಿ ಮೀನುಗಾರರನ್ನು ರಕ್ಷಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಮೀನುಗಾರರ ನಿಯೋಗ ರವಿವಾರ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲ ಸೀತಾರಾಮ್ ಅರರನ್ನು ಭೇಟಿ ಮಾಡಿ ಒತ್ತಾಯಿಸಿತು.

ಇದಕ್ಕೆ ಸ್ಪಂದಿಸಿದ ಸಚಿವರು, ಮೀನುಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗು ವುದು ಹಾಗೂ ಆದಷ್ಟು ಬೇಗ ನೌಕಪಡೆಯ ಅಧಿಕಾರಿಗಳ ಜೊತೆ ಮಲ್ಪೆಗೆ ಭೇಟಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಿಯೋಗದಲ್ಲಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಮಲ್ಪೆಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಅಖಿಲ ಭಾರತೀಯ ಮೀನುಗಾರರ ವೇದಿಕೆಯ ಪದಾಧಿಕಾರಿ ಗಳಾದ ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಶಶಿಧರ್ ತಿಂಗ ಳಾಯ, ಗೋಪಾಲ ಆರ್.ಕೆ., ಹರೀಶ್ ಕುಂದರ್ ಹಾಗೂ ನಾಪತ್ತೆ ಯಾದ ಮೀನುಗಾರರ ಕುಟುಂಬ ಸದಸ್ಯರಾದ ಗಣೇಶ್ ಕೋಟ್ಯಾನ್, ಪ್ರಮೋದ್ ಸಾಲ್ಯಾನ್, ಪಾಂಡು ಮೊಗೇ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News