ಬೈಕ್ ಢಿಕ್ಕಿ: ಮಹಿಳೆ ಮೃತ್ಯು
Update: 2019-02-24 22:51 IST
ಮಂಗಳೂರು, ಫೆ. 24: ನಗರದ ನಾಗುರಿ ಜಂಕ್ಷನ್ ಬಳಿಕ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ಕೋಡಿಕಲ್ ನಿವಾಸಿ ವಸಂತಿ (65) ಗಾಯಗೊಂಡವರು.
ಪಾದಚಾರಿ ಮಹಿಳೆ ರಸ್ತೆ ದಾಟುತ್ತಿದ್ದಾಗ ಪಡೀಲ್‌ನಿಂದ ಪಂಪ್‌ವೆಲ್‌ಗೆ ಬರುತ್ತಿದ್ದ ಬೈಕೊಂದು ಢಿಕ್ಕಿಯಾಗಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಗೆ ಮೂವರು ಮಕ್ಕಳಿದ್ದಾರೆ.
ಈ ಕುರಿತು ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.