ದಿಲ್ಲಿಯಲ್ಲಿ ‘ಮಹಾಘಟಬಂಧನ್’ ಇಲ್ಲ: ಕೇಜ್ರಿವಾಲ್

Update: 2019-02-25 11:19 GMT

  ಹೊಸದಿಲ್ಲಿ, ಫೆ.25: ‘‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಿಲ್ಲಿಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಕಾಂಗ್ರೆಸ್ ತನ್ನ ಬಾಗಿಲು ಮುಚ್ಚಿದೆ. ಹೀಗಾಗಿ ತನ್ನ ಪಕ್ಷ ಆಮ್ ಆದ್ಮಿ ಪಾರ್ಟಿ(ಎಎಪಿ)ರಾಷ್ಟ್ರ ರಾಜಧಾನಿಯಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ’’ ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

‘‘ಅವರು(ಕಾಂಗ್ರೆಸ್)ಘಟಬಂಧನ್(ಮೈತ್ರಿ)ನೊಂದಿಗೆ ಹೋಗಲು ನಿರಾಕರಿಸುತ್ತಿದ್ದಾರೆ. ಆ ನಿಟ್ಟಿಯಲ್ಲಿ ಅವರ ನಿಲುವು ದೃಢವಾಗಿರುವಂತೆ ಕಾಣುತ್ತಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮ ಮುಂದಿರುವ ದೊಡ್ಡ ಸವಾಲು. ಬದ್ಧ ಎದುರಾಳಿಯಾಗಿರುವ ಹೊರತಾಗಿಯೂ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಲು ಮುಂದಾಗಿದ್ದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ದೇಶದ ಆರ್ಥಿಕತೆಯನ್ನು ನಾಶ ಮಾಡಿದ್ದಾರೆ. ದ್ವೇಷದ ವಾತಾವರಣ ನಿರ್ಮಿಸಿದ್ದಾರೆ. ದೇಶದ ಒಗ್ಗಟ್ಟನ್ನು ದುರ್ಬಲಗೊಳಿಸುತ್ತಿದ್ದಾರೆ. ಇದನ್ನು ತಡೆಯಬೇಕಾದರೆ ನಾವು ಏನಾದರೂ ಮಾಡಬೇಕಾಗಿದೆ. ನಮಗೆ ಕಾಂಗ್ರೆಸ್ ಮೇಲೆ ಯಾವುದೇ ಪ್ರೀತಿಯಿಲ್ಲ’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News