×
Ad

ಚೆನ್ನೈತ್ತೋಡಿ: ಶತಮಾನೋತ್ತರ ಪ್ರಗತಿ ಕುರಿತು ಚಿಂತನಾ ಸಭೆ

Update: 2019-02-25 19:02 IST

ವಿಟ್ಲ, ಫೆ. 25: ಚೆನ್ನೈತ್ತೋಡಿ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಶತಮಾನೋತ್ಸವ ಸಂಭ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವದ ಯಶಸ್ವಿಗೆ ಶ್ರಮಿಸಿದವರಿಗೆ ಕೃತಜ್ಞತೆ ಸಮರ್ಪಣೆ ಹಾಗೂ ಶತಮಾನೋತ್ಸವ ನಂತರ ನಡೆಸಬೇಕಾದ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ಸಭೆ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಆಚಾರ್ಯ ಹರ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣಾಭಿಮಾನಿಗಳ ಪ್ರಾಮಾಣಿಕ ಪ್ರಯತ್ನದಿಂದ ಶತಮಾ ನೋತ್ಸವವು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿಯೂ ಎಲ್ಲರೂ ಸೇರಿ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸೋಣ ಎಂದರು.

ಶತಮಾನೋತ್ಸವ ಸಮಿತಿ ಸಂಚಾಲಕ ನಾರಾಯಣ ಶೆಟ್ಟಿ ಪರಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ ಲೆಕ್ಕಪತ್ರ ಮಂಡನೆ ಮಾಡಿದರು.

ಅಭಿನಂದನೆ

ಶತಮಾನೋತ್ಸವ ಸಂದರ್ಭ ಲೋಕಾರ್ಪಣೆಗೊಂಡ ನೂತನ ಭೋಜನ ಶಾಲೆ ನಿರ್ಮಾಣಕ್ಕೆ ಗರಿಷ್ಠ ಪ್ರಮಾಣದ ದೇಣಿಗೆ ನೀಡಿರುವ ದೇರೊಟ್ಟು ಮನೆಯವರ ಪರವಾಗಿ ವಿಲ್ಫ್ರೆಡ್ ಫೆರ್ನಾಂಡೀಸ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಂಝ ಎ.ಬಸ್ತಿಕೋಡಿ, ಪ್ರಧಾನ ಕಾರ್ಯದರ್ಶಿ ಡೇನಿಸ್ ಫೆರ್ನಾಂಡೀಸ್, ಸಂಚಾಲಕ ನಾರಾಯಣ ಶೆಟ್ಟಿ ಪರಾರಿ, ಸಲಹೆಗಾರ ಗೋಪಾಲ ಅಂಚನ್, ಕೋಶಾಧಿಕಾರಿ ಸಿ.ಅನಂತ ಪೈ ಅವರನ್ನು ಸನ್ಮಾನಿಸಲಾಯಿತು.

ಶತಮಾನೋತ್ಸವ ಯಶಸ್ವಿಗೆ ಶ್ರಮಿಸಿದ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಶಿಕ್ಷಕರನ್ನು ಗೌರವಿಸಲಾಯಿತು. ಹಿರಿಯ ಗುತ್ತಿಗೆದಾರ ಅಮ್ಮು ರೈ ಹರ್ಕಾಡಿ ಸನ್ಮಾನಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಗೋಪಾಲ ಅಂಚನ್ ಅಭಿನಂದನಾ ಭಾಷಣ ಮಾಡಿದರು.

ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪ್ರಮೀಳಾ ಶೆಟ್ಟಿ, ಶತಮಾನೋತ್ಸವ ಸಮಿತಿಯ ಪ್ರಮುಖರಾದ ಶೀನ ಶೆಟ್ಟಿ, ಸಿ.ಶ್ರೀಧರ ಜಿ.ಪೈ, ಜನಾರ್ಧನ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಪ್ರಕಾಶ್ ಗಟ್ಟಿ, ಶಿಕ್ಷಕರಾದ ಜಾನೆಟ್ ಕೊನ್ಸೆಸೊ, ಸಂತೋಷ್ ಕುಮಾರ್, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ವಿಜಯಶ್ರೀ ಸ್ವಾಗತಿಸಿದರು. ಶಿಕ್ಷಕಿ ಸುಮನ ವಂದಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯ ಶೌಕತ್ ಅಲಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News