ಸರಣಿ ಅಪಘಾತ: ಇಬ್ಬರು ಸಾವು, ಮತ್ತಿಬ್ಬರು ಗಂಭೀರ
Update: 2019-02-25 20:15 IST
ಮೈಸೂರು,ಫೆ.25: ಕಾರು, ಆಟೋ- ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಬನ್ನೂರು ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಬನ್ನೂರು ರಸ್ತೆಯ ವಾಜಮಂಗಲ ಗ್ರಾಮದ ಬಳಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿ ಒಂದಕ್ಕೊಂದು ಢಿಕ್ಕಿಯಾಗಿ ವಾಹನಗಳು ಹಳ್ಳಕ್ಕೆ ಬಿದ್ದಿವೆ ಎನ್ನಲಾಗಿದೆ.
ಸಿದ್ದಾರ್ಥನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಸಂಬಂಧ ಸಿದ್ದಾರ್ಥ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.