ಉಡುಪಿ: ದಂತ ಆರೋಗ್ಯಕ್ಕಾಗಿ 3000 ವಿದ್ಯಾರ್ಥಿಗಳ ದತ್ತು
Update: 2019-02-25 20:28 IST
ಉಡುಪಿ, ಫೆ. 25: ಅಖಿಲ ಭಾರತ ದಂತ ವೈದ್ಯಕೀಯ ಸಂಘದಿಂದ ರಾಷ್ಟ್ರೀಯ ಶಾಲಾ ಮಕ್ಕಳ ಆರೋಗ್ಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ದಂತ ಆರೋಗ್ಯಕ್ಕಾಗಿ 3000 ವಿದ್ಯಾರ್ಥಿಗಳನ್ನು ದತ್ತು ತೆಗೆದು ಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಪದಾಧಿಕಾರಿ ಡಾ.ಮನೋಜ್ ಬ್ರಹ್ಮಾವರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ಮೂರು ವರ್ಷ ಗಳಿಂದ ಸಮುದಾಯ ದಂತ ಆರೋಗ್ಯ ಅಭಿಯಾನವನ್ನು ನಡೆಸಲಾಗುತ್ತಿದೆ. ದಂತ ಆರೋಗ್ಯ ಹಾಗೂ ಕ್ಯಾನ್ಸರ್ ಬಗ್ಗೆ ವಿಶೇಷ ಮಾಹಿತಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದೇ ರೀತಿ ವಿಕಲಚೇತನರು, ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪದಾಧಿಕಾರಿಗಳಾದ ಡಾ.ಫಯಾಸ್, ಡಾ.ಸುಧೀರ್ ಮಲ್ಪೆ ಉಪಸ್ಥಿತರಿದ್ದರು.