ಫೆ.28ಕ್ಕೆ ಮಹಿಳೆಯರಿಗಾಗಿ ಬೃಹತ್ ಉದ್ಯೋಗ ಮೇಳ

Update: 2019-02-25 16:26 GMT

ಬೆಂಗಳೂರು, ಫೆ.25: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಿಳೆಯರಿಗಾಗಿ ಫೆ.28ರಂದು ಶಾಖಾಂಬರಿನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೂ ಪ್ರಿಯದರ್ಶಿನಿ ಬೃಹತ್ ಕೌಶಲ್ಯ ಮತ್ತು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕಿ ಸೌಮ್ಯಾರೆಡ್ಡಿ, ಉಪಮುಖ್ಯಮಂತ್ರಿ ಡಾ.ಜಿ.ಪರಪಮೇಶ್ವರ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಹಾಜರಿರಲಿದ್ದಾರೆ ಎಂದು ತಿಳಿಸಿದರು.

ನೂರಕ್ಕೂ ಹೆಚ್ಚು ಕಂಪೆನಿಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಮಹಿಳಾ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದು, ಎಸೆಸ್ಸೆಲ್ಸಿ ಉರ್ತ್ತೀಣ ಹಾಗೂ ಅನುತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಸೇರಿದಂತೆ ಯಾವುದೇ ಪದವಿ ಹೊಂದಿದವರು ಮೇಳದಲ್ಲಿ ಭಾಗವಹಿಸಬಹುದು. ನೋಂದಣಿ ಉಚಿತವಾಗಿರಲಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 78358 44440 ಅನ್ನು ಸಂಪರ್ಕಿಸಬಹುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News