ಖಾಸಗಿ ವೈದ್ಯಕೀಯ ಕೋರ್ಸ್ ಶುಲ್ಕ ಶೇ.15ರಷ್ಟು ಹೆಚ್ಚಳ ಖಂಡನೀಯ: ಪರಿಷತ್ ಸದಸ್ಯ ಎನ್.ರವಿಕುಮಾರ್

Update: 2019-02-25 16:44 GMT

ಬೆಂಗಳೂರು, ಫೆ.25: ರಾಜ್ಯದ ಸಮ್ಮಿಶ್ರ ಸರಕಾರವು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದು ವೈದ್ಯಕೀಯ ಕೋರ್ಸುಗಳ ಶುಲ್ಕವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ನೀಡಿರುವುದು ಈ ಸರಕಾರದ ದಿವಾಳಿತನವನ್ನು ಎತ್ತಿ ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆರೋಪಿಸಿದ್ದಾರೆ.

ಗ್ರಾಮೀಣ, ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಪರವಾಗಿರಬೇಕಿದ್ದ ರಾಜ್ಯ ಸರಕಾರ, ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದಿರುವುದು ತೀವ್ರ ಖಂಡನೀಯ ಹಾಗೂ ಈ ರಾಜ್ಯದ ದೌರ್ಭಾಗ್ಯವೆನ್ನಬಹುದು. ಈ ನಿರ್ಧಾರದಿಂದಾಗಿ ಬಡ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಹಾಗೂ ವೈದ್ಯರಾಗುವ ಕನಸಿಗೆ ಕೊಳ್ಳಿ ಇಡುವ ಪ್ರಯತ್ನವನ್ನು ಸರಕಾರ ಮಾಡಿದೆ ಎಂದು ಅವರು ದೂರಿದ್ದಾರೆ.

ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಈ ಕೂಡಲೇ ಗಮನ ಹರಿಸಿ ಏರಿಸಿರುವ ಶುಲ್ಕವನ್ನು ಕೂಡಲೇ ಹಿಂಪಡೆಯಬೇಕು. ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಪರವಾದ ನಿರ್ಧಾರವನ್ನು ಸರಕಾರ ತೆಗೆದುಕೊಳ್ಳಬೇಕು ಎಂದು ರವಿಕುಮಾರ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News