×
Ad

ಹೀಗೆ ನಡೆಯಿತು ಉಡುಪಿ ಡಿಸಿ ಹೆಫ್ಸಿಬಾ ರಾಣಿ-ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಮದುವೆ..!

Update: 2019-02-25 22:18 IST

ಉಡುಪಿ, ಫೆ. 25: ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಐಎಎಸ್  ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಇಂದು ಹುಬ್ಬಳ್ಳಿಯಲ್ಲಿ ಸರಳವಾಗಿ ವಿವಾಹವಾಗುವ ಮೂಲಕ‌ ಮಾದರಿಯಾಗಿದ್ದಾರೆ.

ಹುಬ್ಬಳ್ಳಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ಮದುವೆ ಆದ ಅವರು ಬಳಿಕ‌ ಪರಸ್ಪರ ಹಾರ ಬದಲಾಯಿಸಿಕೊಂಡರು. ಈ ಸಂದರ್ಭದಲ್ಲಿ ಅವರ ಕೆಲ ಕುಟುಂಬದ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಉಜ್ವಲ್ ಕುಮಾರ್ ಪ್ರಸ್ತುತ ಕೃಷ್ಣ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಹಾಗೂ ಪುನರ್ವಸತಿ ಆಯುಕ್ತರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News