×
Ad

ಫೆ. 28ರಂದು ಬ್ಯಾರಿ ಅಧ್ಯಯನ ಪೀಠ ಉದ್ಘಾಟನೆ

Update: 2019-02-25 22:33 IST

ಮಂಗಳೂರು, ಫೆ.25: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಫೆ. 28ರಂದು ಮಧ್ಯಾಹ್ನ 2:30ಕ್ಕೆ ಬ್ಯಾರಿ ಅಧ್ಯಯನ ಪೀಠವನ್ನು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಸಂಸದ ನಳಿನ್‌ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.

ಶಾಸಕರಾದ ವೇದವ್ಯಾಸ, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕಿ, ಉಮಾನಾಥ ಕೋಟ್ಯಾನ್, ಎಸ್.ಅಂಗಾರ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಬಿ.ಎಂ.ಫಾರೂಕ್, ಹರೀಶ್‌ಕುಮಾರ್, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಕೆ., ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕರಂಬಾರು ಮುಹಮ್ಮದ್, ‘ಪ್ರಜಾವಾಣಿ’ ಸಹ ಸಂಪಾದಕ ಬಿ.ಎಂ.ಹನೀಫ್, ಬ್ಯಾರಿ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ಚಂದ್ರಹಾಸ್ ರೈ, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷರಾದ ಎಂ.ಬಿ. ಅಬ್ದುಲ್ ರಹ್ಮಾನ್, ರಹೀಂ ಉಚ್ಚಿಲ್, ಬಿ.ಎ. ಮುಹಮ್ಮದ್ ಹನೀಫ್, ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಹಾಗೂ ಪ್ರಾಧ್ಯಾಪಕ ಪ್ರೊ. ಇಸ್ಮಾಯೀಲ್ ಬಿ., ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎ.ಎಂ.ಖಾನ್ ಮತ್ತಿತರರು ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News