ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನ ಗೆಲ್ಲುವುದು ಖಚಿತ: ಶೋಭಾ ಕರಂದ್ಲಾಜೆ

Update: 2019-02-25 17:40 GMT

ಚಿಕ್ಕಮಗಳೂರು, ಫೆ.25: ಲೋಕಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿ ಬೆಂಬಲಿಸುವುದು ಖಚಿತ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರದ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಸುಳ್ಳು ಹೇಳಿಕೊಂಡೇ ಕಾಲ ಕಳೆಯುತ್ತಿದೆ. ಯಾವುದೆ ಭರವಸೆ ಈಡೇರಿಸಿಲ್ಲ. 49 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಹೇಳಿದ್ದರು. ಅವರೇ ಜಾಹಿರಾತು ನೀಡಿ 12 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ ಎಂದು ಅವರೇ ಹೇಳುತ್ತಾರೆ. 12 ಸಾವಿರ ಕೋಟಿ ರೂ. ಕೂಡ ಸಾಲಮನ್ನಾ ಆಗಿಲ್ಲ. 300 ರಿಂದ400 ಕೋಟಿ ರೂ. ಮಾತ್ರ ಸಾಲಮನ್ನಾ ಆಗಿದೆ. ಸರಕಾರದ ಭರವಸೆ ಸುಳ್ಳು ಎಂಬುದು ಜನತೆಗೆ ಗೋತ್ತಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನ ಗೆಲ್ಲುವುದು ಖಚಿತ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ರಾಜ್ಯ ಸರಕಾರ ವೈಫಲ್ಯಗಳನ್ನು ಕಂಡು ದಿನೇಶ್ ಗುಂಡೂರಾವ್ ಅವರಿಗೆ ಬುದ್ಧಿಭ್ರಮಣೆ ಆಗಿದೆ. ಅಷ್ಟೊಂದು ದೊಡ್ಡ ಕಾರ್ಯಕ್ರಮದಲ್ಲಿ ಭದ್ರತೆ ಒದಗಿಸುವುದು ರಾಜ್ಯ ಸರಕಾರದ ಜವಬ್ದಾರಿ. ಕಾರು ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿಶಾಮಕ ದಳ ಇರಲಿಲ್ಲ, ಪೊಲೀಸ್ ಸಿಬ್ಬಂದಿ ಇರಲಿಲ್ಲ, 300 ಕಾರು ಬೆಂಕಿಯಲ್ಲಿ ಸುಟ್ಟು ಹೋಗುವಾಗ ದಿನೇಶ್ ಗುಂಡೂರಾವ್ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದರು. 

ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗುತ್ತಿದೆ. 120 ಸ್ಥಾನದಿಂದ ಜನತೆ 80 ಸ್ಥಾನಕ್ಕೆ ಇಳಿಸಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ದುರುದ್ದೇಶದಿಂದ ಜೆಡಿಎಸ್ ನೊಂದಿಗೆ ಕೈಜೋಡಿಸಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದೆ ಎಂದು ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News