ಮಂಡ್ಯ: ಫೆ.27 ರಿಂದ ಸಿಟ್ಟಿಂಗ್ ಪ್ಯಾರಾ ವಾಲಿಬಾಲ್ ಚಾಂಪಿಯನ್‍ಶಿಪ್
ಮಂಡ್ಯ, ಫೆ.25: ಪ್ಯಾರಾ ಒಲಂಪಿಕ್ಸ್ ಅಸೋಸಿಯೇಷನ್ ಆಫ್ ಮಂಡ್ಯ ವತಿಯಿಂದ ನಗರ ಪಿಇಎಸ್ ಒಳಾಂಗಣದ ಕ್ರೀಡಾಂಗಣದಲ್ಲಿ ವಿಶೇಷ ಚೇತನರಿಗಾಗಿ ಫೆ.27 ಮತ್ತು ಫೆ.28ರಂದು ದಕ್ಷಿಣ ವಲಯ ಪುರುಷರ ಮತ್ತು ಮಹಿಳೆಯರ ಸಿಟ್ಟಿಂಗ್ ಪ್ಯಾರಾ ವಾಲಿಬಾಲ್ ಚಾಂಪಿಯನ್‍ಶಿಪ್-2019 ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್‍ನ ಜಿಲ್ಲಾಧ್ಯಕ್ಷ ಬಿ.ಬೋರೇಗೌಡ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾ, ಪಾಂಡಿಚೇರಿ, ಕೇರಳ ರಾಜ್ಯಗಳಿಂದ ವಿಕಲ ಚೇತನರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಿದ್ದಾರೆ ಎಂದರು.
ಫೆ.27ರಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು, ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಫೆ.28 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪಿಇಟಿ ಸಂಸ್ಥೆ ಅಧ್ಯಕ್ಷ ಎಚ್.ಡಿ.ಚೌಡಯ್ಯ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಸಬ್ಬನಹಳ್ಳಿ ಶಿವಕುಮಾರ್, ಉಪಾಧ್ಯಕ್ಷ ಶಿವಲಿಂಗಯ್ಯ, ಬಸವರಾಜು, ಸೋಮಶೇಖರ್ ಉಪಸ್ಥಿತರಿದ್ದರು.