ಗಂಜಿಮಠ: ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
Update: 2019-02-26 19:03 IST
ಮಂಗಳೂರು, ಫೆ.26: ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ಆಧಾರದಲ್ಲಿ ಭರ್ತಿ ಮಾಡಲು ಆರ್ಜಿ ಆಹ್ವಾನಿಸಲಾಗಿದೆ.
ಎಸೆಸೆಲ್ಸಿ ಪಾಸಾದ ಹಾಗೂ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಮೇಲ್ವಿಚಾರಕ ಸ್ಥಾನಕ್ಕೆ 7,000 ರೂ. ಗೌರವ ಸಂಭಾವನೆ ನೀಡಲಾಗುವುದು. ಮೇಲ್ವಿಚಾರಕರ ಸ್ಥಾನವು ಪ್ರವರ್ಗ-1 (ಗ್ರಾಮೀಣ ಅಭ್ಯರ್ಥಿ) ಮೀಸಲಾಗಿದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಲು ಮಾ. 20 ಕೊನೆಯ ದಿನ ಆಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ್ ಅಥವಾ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಅಥವಾ ದೂರವಾಣಿ ಸಂಖ್ಯೆ: 0824-2441905 ಸಂಪರ್ಕಿಸಲು ಮುಖ್ಯ ಗ್ರಂಥಾಲಯಾಧಿಕಾರಿ(ಪ್ರಭಾರ), ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.