×
Ad

11 ನಿಗಮ ಮಂಡಳಿ ಅಧ್ಯಕ್ಷರ ನೇಮಕ

Update: 2019-02-26 20:26 IST

ಬೆಂಗಳೂರು, ಫೆ.26: ಸಂಪುಟ ದರ್ಜೆ ಸ್ಥಾನಮಾನ ನೀಡಿ, ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಸೇರಿದಂತೆ ಒಟ್ಟು 11 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. 

ಶಾಸಕ ನಾಗನಗೌಡ ಕಂದಕೂರು-ಅಧ್ಯಕ್ಷರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶಾಸಕ ರಾಜಾ ವೆಂಕಟಪ್ಪ ನಾಯಕ-ಅಧ್ಯಕ್ಷರು, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಶಾಸಕ ಡಿ.ಸಿ.ಗೌರಿಶಂಕರ್-ಅಧ್ಯಕ್ಷ, ಎಂಎಸ್‌ಐಎಲ್, ಶಾಸಕ ಬಿ.ಸತ್ಯನಾರಾಯಣ-ಅಧ್ಯಕ್ಷ, ಕೆಎಸ್ಸಾರ್ಟಿಸಿ, ಶಾಸಕ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ-ಅಧ್ಯಕ್ಷ, ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ.

ಶಾಸಕ ಡಾ.ಕೆ.ಅನ್ನದಾನಿ-ಅಧ್ಯಕ್ಷ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಶಾಸಕ ಕೆ.ಎಂ.ಶಿವಲಿಂಗೇಗೌಡ-ಕರ್ನಾಟಕ ಗೃಹ ಮಂಡಳಿ, ಶಾಸಕ ಕೆ.ಮಹದೇವ-ಅಧ್ಯಕ್ಷ, ರಾಜ್ಯ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ನಿಗಮ. ಮುಹಮ್ಮದ್ ಜಫ್ರುಲ್ಲಾ ಖಾನ್- ಅಧ್ಯಕ್ಷ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ.

ಕಾಂಗ್ರೆಸ್: ಕಾಂಗ್ರೆಸ್ ಶಾಸಕ ಟಿ.ವೆಂಕಟರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನು ಎಸ್.ಭೀಮಾನಾಯಕ್ ಅವರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಸಿಎಂ ರಾಜಕೀಯ ಕಾರ್ಯದರ್ಶಿ

ಜೆಡಿಎಸ್ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಸಂಸದೀಯ ಕಾರ್ಯದರ್ಶಿ

ಶಾಸಕ ದೇವಾನಂದ್ ಪೂಲಸಿಂಗ್ ಚವ್ಹಾಣ್ ಅವರನ್ನು ಮುಖ್ಯಮಂತ್ರಿ (ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ) ಸಂಸದೀಯ ಕಾರ್ಯದರ್ಶಿಯಾಗಿ ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಸಚಿವರ ಸಂಸದೀಯ ಕಾರ್ಯದರ್ಶಿ

ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆ, ಶಾಸಕ ಎಂ.ಶ್ರೀನಿವಾಸ-ಸಹಕಾರ ಹಾಗೂ ಶಾಸಕ ಕೆ.ಎ.ತಿಪ್ಪೇಸ್ವಾಮಿ ಅವರನ್ನು ಲೋಕೋಪಯೋಗಿ ಸಚಿವರ ಸಂಸದೀಯ ಕಾರ್ಯದರ್ಶಿಗಳನ್ನಾಗಿ ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ಈ ಕೂಡಲೇ ಜಾರಿಗೆ ಬರುವಂತೆ ನೇಮಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News