‘ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಎಲ್ಲರಿಗೂ ಅನಿವಾರ್ಯ’
ಮಣಿಪಾಲ, ಫೆ. 26: ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ತೀರಾ ಹಿಂದುಳಿದಿರುವ ಗ್ರಾಮವಾದ ಹಳ್ಳಿಬೇರಿನಲ್ಲಿ ಬೆಂಗಳೂರಿನ ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಹಾಗೂ ಸೆಲ್ಕೋ ಸೋಲಾರ್ ಕುಂದಾಪುರ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಕೊಯ್ಲು ಮತ್ತು ನವೀಕರಿಸಬಹುದಾದ ಇಂಧನ ವಿಷಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿಸರದಲ್ಲಿ ಸೋಮವಾರ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಸಂಸ್ಥೆಯ ಉಪನಿರ್ದೇಶಕ ರವಿ ಮಾತನಾಡಿ, ಹಳ್ಳಿಬೇರಿನಂತಹ ಬೆಟ್ಟ, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮದಲ್ಲೇ ಬೇಸಿಗೆಯಲ್ಲಿ ನೀರಿನ ಕೊರತೆ ಇದೆ ಎಂದಾಗ ನಾವು ಮಳೆ ನೀರನ್ನು ಇಂಗಿಸುವ ಕಾರ್ಯ ಮಾಡುವುದು ಎಷ್ಟು ಅನಿವಾರ್ಯವಾಗಿದೆ ಎಂದು ತಿಳಿದುಕೊಳ್ಳಬೇಕು ಎಂದರು.
ಇಂದು ಜನರಿಗೆ ಅದರಲ್ಲೂ ಮುಖ್ಯವಾಗಿ ಮುಂದಿನ ಜನಾಂಗಕ್ಕೆ ತಾಜ್ಯ ನಿರ್ವಹಣೆ ಮತ್ತು ವಿಲೇವಾರಿ, ಸೌರ ಶಕ್ತಿಯ ಬಳಕೆ, ನೀರಿನ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಬೇಕು. ಆಗ ಮಾತ್ರ ಮುಂದಿನ ಜನಾಂಗ ಪ್ರಕೃತಿಯೊಂದಿಗೆ ಸಹಬಾಳ್ವೆ ನಡೆಸಲು ಸಾಧ್ಯವಾದೀತು ಎಂದು ರವಿ ಅಭಿಪ್ರಾಯಪಟ್ಟರು.
ಸೆಲ್ಕೋ ವಲಯಾಧಿಕಾರಿ ಶೇಖರ ಶೆಟ್ಟಿ ಮಾತನಾಡಿ ಸೆಲ್ಕೋ ಸಂಸ್ಥೆ ಹಳ್ಳಿಬೇರು ಗ್ರಾಮದ ಎಲ್ಲ ಮನೆಗಳಿಗೆ ಸೌರ ದೀಪ ಅಳವಡಿಸುವ ಕೆಲಸ ಮಾಡುತ್ತಿದೆ. ಹಳ್ಳಿಬೇರು ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಸೋಲಾರ್ ಇ-ಶಾಲಾ, ಡಿಜಿಟಲ್ ಕಲಿಕೆ, ಸೌರ ದೀಪಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಇಲ್ಲಿನ ಅಂಗನವಾಡಿಗೆ ಸೌರ ವಿದ್ಯುತ್ ಮೂಲಕ ನಡೆಯುವ ಟ್ಯಾಬ್, ದೀಪಗಳು ಮತ್ತು ಫ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ. ಅಲ್ಲದೇ ಶಾಲೆಯ ಬಾವಿಯಿಂದ ನೀರೆತ್ತಲು ಸೋಲಾರ್ ಪಂಪ್ ಅಳವಡಿಸುವ ಕಾರ್ಯ ಕೈಗೆತ್ತಿಕೊಂಡಿದೆ ಎಂದರು.
ಹಳ್ಳಿಬೇರು ಗ್ರಾಮದಿಂದ ಕೊಲ್ಲೂರಿಗೆ ಹೋಗುವ ದಾರಿಯಲ್ಲಿ ಬೀದಿ ದೀಪಗಳ ಕೊರತೆಯಿದ್ದು ಸುಮಾರು 25 ಸೋಲಾರ್ ದಾರಿ ದೀಪಗಳನ್ನು ಅಳವಡಿಸುವ ಬಗ್ಗೆ ಚಿಂತನೆಯಿದ್ದು ಈ ಕಾರ್ಯದಲ್ಲಿ ದಾನಿಗಳು, ಸರಕಾರಿ ಮತ್ತು ಸರಕಾರೇತರ ಸಂಸ್ಥೆಗಳು ಸೆಲ್ಕೋ ಜೊತೆ ಕೈಜೋಡಿಸುವಂತೆ ಮನವಿ ಮಾಡಿದರು.
ಸಂಪನ್ಮೂಲ ವ್ಯಕ್ತಿ ಬಾರಕೂರು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ಸೀತಾರಾಮ ಶೆಟ್ಟಿ ಮಾಹಿತಿ ನೀಡಿ ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂಧನ ಬಳಕೆ ಇವು ಭವಿಷ್ಯದ ಮನುಕುಲದ ಉಳಿವಿನ ಮಂತ್ರ ಎಂದರು.
ಸಂಪನ್ಮೂಲ ವ್ಯಕ್ತಿ ಬಾರಕೂರು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ಸೀತಾರಾಮ ಶೆಟ್ಟಿ ಮಾಹಿತಿ ನೀಡಿ ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂನಬಳಕೆಇವುವಿಷ್ಯದ ಮನುಕುಲದ ಉಳಿವಿನ ಮಂತ್ರ ಎಂದರು. ಭಾರತೀಯ ವಿಕಾಸ ಟ್ರಸ್ಟ್‌ನ ಅಧಿಕಾರಿ ಅರುಣ್ ಪಟವರ್ಧನ್ ಸ್ವಾಗತಿಸಿ, ಹಳ್ಳಿಬೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೇಶವ ಮೂರ್ತಿ ವಂದಿಸಿದರು. ಶಿಕ್ಷಕ ಹರೀಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.