ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣ: ಗೌತಮ್ ಖೇತಾನ್ ವಿರುದ್ಧ ವಾರಂಟ್ ಜಾರಿ

Update: 2019-02-26 16:12 GMT

ಹೊಸದಿಲ್ಲಿ, ಫೆ. 26: 3,600 ಕೋಟಿ ರೂಪಾಯಿಯ ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಕಾಪ್ಟರ್ ಹಗರಣದ ಆರೋಪಿಯಾಗಿರುವ ವಕೀಲ ಗೌತಮ್ ಖೇತಾನ್‌ಗೆ ದಿಲ್ಲಿ ನ್ಯಾಯಾಲಯ ಹಾಜರಾಗುವಂತೆ ಮಂಗಳವಾರ ಆದೇಶ ಹೊರಡಿಸಿದೆ.

ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶ ಹೊರಡಿಸಿರುವ ವಿಶೇಷ ನ್ಯಾಯಮೂರ್ತಿ ಅರವಿಂದ್ ಕುಮಾರ್, ವಿಚಾರಣೆಯನ್ನು ನವೆಂಬರ್ 9ಕ್ಕೆ ಮುಂದೂಡಿದ್ದಾರೆ. ತಮ್ಮ ತನಿಖೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಕೆಲವು ವರ್ಷಗಳ ಹಿಂದೆ ಖೇತಾನ್ ಅವರನ್ನು ಬಂಧಿಸಿತ್ತು. ಅನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಖೇತಾನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.

ಗೌತಮ್ ಖೇತಾನ್ ಹಲವು ವಿದೇಶಿ ಬ್ಯಾಂಕ್ ಖಾತೆಗಳನ್ನು ಹಾಗೂ ಕಪ್ಪು ಹಣ ಹೊಂದಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಆರೋಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News