ಫೆ. 28ರಂದು ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
Update: 2019-02-26 22:47 IST
ಬಂಟ್ವಾಳ, ಫೆ. 26: ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಕ್ರಮವು ಫೆ. 28ರಂದು ಬೆಳಗ್ಗೆ 10:30 ರಿಂದ ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎನ್‍ಪಿಸಿಡಿಸಿಆರ್ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ. ಸುಷ್ಮಾ ಅಡಪ ಮಾಹಿತಿ ಶಿಬಿರ ನಡೆಸಿಕೊಡುವರು.
ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ. ಪ್ರಸಾದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.