ರಫೇಲ್ ತೀರ್ಪು: ಮರು ಪರಿಶೀಲನಾ ಮನವಿ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಸುಪ್ರೀಂ ಒಪ್ಪಿಗೆ

Update: 2019-02-26 18:13 GMT

ಹೊಸದಿಲ್ಲಿ, ಫೆ. 26: ರಫೇಲ್ ಒಪ್ಪಂದ ಪ್ರಶ್ನಿಸಿ ಸಲ್ಲಿಸಿದ ಮನವಿ ತಿರಸ್ಕರಿಸಿ ಡಿಸೆಂಬರ್‌ನಲ್ಲಿ ನೀಡಿದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ.

ತಮ್ಮ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಕೆ.ಎಂ. ಜೋಸೆಫ್ ಅವರನ್ನು ಒಳಗೊಂಡ ಪೀಠ, ಕೇಂದ್ರ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್ ಅವರ ಮರು ಪರಿಶೀಲನಾ ಅರ್ಜಿಯನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂಬ ಮನವಿಯನ್ನು ಪರಿಗಣಿಸಿತು. ಅವರು ಮನವಿ ಮಾಡಿದಂತೆ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆಗ ಅವಕಾಶ ನೀಡಲಾಗಿದೆ ಎಂದು ಪೀಠ ಹೇಳಿದೆ.

ರಫೇಲ್ ಯುದ್ಧ ವಿಮಾನಗಳ ಖರೀದಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಮನವಿಗಳನ್ನು ಸುಪ್ರೀಂ ಕೋರ್ಟ್ 2018 ಡಿಸೆಂಬರ್ 14ರಂದು ತಿರಸ್ಕರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News