ವಾಟ್ಸ್‌ಆ್ಯಪ್‌ನಲ್ಲಿ ದೇಶವಿರೋಧಿ ಸ್ಟೇಟಸ್: ಆರೋಪಿ ವಿರುದ್ಧ ಪ್ರಕರಣ ದಾಖಲು

Update: 2019-02-27 04:52 GMT

ಹನೂರು, ಫೆ.27: ಪಾಕಿಸ್ತಾನ ಪರವಾಗಿ ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದ ಆರೋಪದಲ್ಲಿ ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಯುವಕನೋರ್ವನ ವಿರುದ್ಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಮುಹಮ್ಮದ್ ನೌಶಾದ್ ಆರೋಪಿ. ನಿನ್ನೆ ರಾತ್ರಿ ಭಾರತೀಯ ವಾಯುಪಡೆಯು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ಬಳಿಕ ಈತ ತನ್ನ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ದೇಶ ವಿರೋಧಿ ಹೇಳಿಕೆಗಳನ್ನು ಹಾಕಿದ್ದನೆನ್ನಲಾಗಿದೆ.

 ಈ ವಿಚಾರ ತಿಳಿಯುತ್ತಲೇ ಯುವಕನ ಗ್ರಾಮದಲ್ಲಿ, ಸುತ್ತಮುತ್ತಲಿನ ಗ್ರಾಮಸ್ಥರು ಜಮಾಯಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೌದಳ್ಳಿಗೆ ಡಿವೈಎಸ್ಪಿ ಪುಟ್ಟಮಾದಯ್ಯ ಹಾಗೂ ರಾಮಪುರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಈ ಸಂಬಂಧ ಆರೋಪಿ ನೌಶಾದ್ ವಿರುದ್ಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News