ಮಾ. 6ಕ್ಕೆ ಉಡುಪಿ ಜಿಪಂ ತ್ರೈಮಾಸಿಕ ಕೆಡಿಪಿ ಸಭೆ
Update: 2019-02-27 20:03 IST
ಉಡುಪಿ, ಫೆ.27: ಉಡುಪಿ ಜಿಪಂ ತ್ರೈಮಾಸಿಕ ಕೆಡಿಪಿ ಸಭೆ ಮಾ.6ರಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಂಧು ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.